ಆಮೋಸ 8:5 - ಕನ್ನಡ ಸಮಕಾಲಿಕ ಅನುವಾದ5 ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು. ಅಧ್ಯಾಯವನ್ನು ನೋಡಿ |