Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:6 - ಕನ್ನಡ ಸಮಕಾಲಿಕ ಅನುವಾದ

6 ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ,” ಎಂದುಕೊಳ್ಳುತ್ತೀರಿ, ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ದೇಶದ ದರಿದ್ರರನ್ನು ನಿರ್ಮೂಲ ಮಾಡುವವರೇ, ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟುಗೂಡಿಸಿ ಮಾರೋಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:6
11 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.


ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.


ಯೆಹೂದದ ಹಾಗೂ ಯೆರೂಸಲೇಮಿನ ಜನರನ್ನು ಅವರ ಪ್ರಾಂತಗಳಿಂದ ದೂರ ಮಾಡುವುದಕ್ಕಾಗಿ ಗ್ರೀಕರಿಗೆ ಮಾರಿದ್ದೀರಿ.


ನನ್ನ ಜನರಿಗೋಸ್ಕರ ಚೀಟುಹಾಕಿ, ಬಾಲಕರನ್ನು ವೇಶ್ಯಾ ವೃತ್ತಿಗೆ ಕೊಟ್ಟು, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕಾಗಿ ಮಾರಿದ್ದಾರೆ.


“ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು.


ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”


ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು