Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:8 - ಕನ್ನಡ ಸಮಕಾಲಿಕ ಅನುವಾದ

8 “ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವದಲ್ಲವೆ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೆ; ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವದು, ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:8
22 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ, ನೀವು ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವುದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನೈಲ್ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಈಜಿಪ್ಟಿನ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವುದು.


ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.


ಈಜಿಪ್ಟ್ ನೈಲ್ ನದಿಯ ಪ್ರಳಯದ ಹಾಗೆ ಏರುತ್ತದೆ; ಅದರ ನೀರು ನದಿಗಳ ಹಾಗೆ ಕದಲುತ್ತವೆ; ‘ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ; ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ,’ ಎಂದು ಅವಳು ಹೇಳುತ್ತಾಳೆ.


ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು; ಪರ್ವತಗಳ ಅಸ್ತಿವಾರಗಳು ಸಹ ಕದಲಿದವು.


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.


ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.


ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


“ನೈಲ್ ನದಿಯಂತೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?


ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.


ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು