Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:10 - ಕನ್ನಡ ಸಮಕಾಲಿಕ ಅನುವಾದ

10 ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮನ್ನು ಆಪತ್ತು ಹಿಂದಟದು; ನಮ್ಮನ್ನು ತಡೆಯುವುದಿಲ್ಲ, ಎನ್ನುವ ನನ್ನ ಜನರಲ್ಲಿರುವ ಸಮಸ್ತ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’ ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:10
24 ತಿಳಿವುಗಳ ಹೋಲಿಕೆ  

ನೀವು ಕೆಟ್ಟ ದಿವಸವನ್ನು ದೂರಮಾಡಿಕೊಂಡು, ಭಯಂಕರ ಆಳ್ವಿಕೆಯನ್ನು ಹತ್ತಿರ ಮಾಡಿಕೊಳ್ಳುತ್ತೀರಿ.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.


ನಾವು ಅವರ ಕೆಲಸವನ್ನು ನೋಡುವಂತೆ, “ದೇವರು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ. ನಾವು ಇಸ್ರಾಯೇಲಿನ ಪರಿಶುದ್ಧರ ಆಲೋಚನೆಯನ್ನು ತಿಳಿದುಕೊಳ್ಳುವ ಹಾಗೆ ಅದು ಸಮೀಪಿಸಿ ಬರಲಿ ಎಂದು ಹೇಳುವವರಿಗೆ ಕಷ್ಟ!”


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.


“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು