Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಇಂತೆನ್ನುತ್ತಾನೆ - ಆಹಾ, ಮುಂದಿನ ಕಾಲದಲ್ಲಿ ಉಳುವವನು ಕೊಯ್ಯುವವನ ಹಿಂದೆ, ದ್ರಾಕ್ಷೆತುಳಿಯುವವನು ಬಿತ್ತುವವನ ಹಿಂದೆ ಒತ್ತಿಕೊಂಡು ಹೋಗುವರು; ಬೆಟ್ಟಗಳು ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುತ್ತವೋ ಎಂಬಂತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:13
15 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.


ನೀವು, ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುತ್ತದೆ’ ಎಂದು ಹೇಳುವುದಿಲ್ಲವೇ? ಮತ್ತು ಇಗೋ, ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ. ಏಕೆಂದರೆ ಅವು ಈಗಾಗಲೇ ಸುಗ್ಗಿಗೆ ಸಿದ್ಧವಾಗಿವೆ.


ಮುಳ್ಳಿಗೆ ಬದಲಾಗಿ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವುವು. ಇದು ಯೆಹೋವ ದೇವರ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.


ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.


“ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.


ಯೆಹೂದವು ಎಂದೆಂದಿಗೂ ಜನಭರಿತವಾಗುವುದು. ಯೆರೂಸಲೇಮು ಸಹ ತಲತಲಾಂತರಕ್ಕೂ ನಿಲ್ಲುವುದು.


ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ.


ಯೆಹೋವ ದೇವರ ಮುಂದೆ ಬೆಟ್ಟಗಳು ಕಂಪಿಸಿದವು. ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮುಂದೆ ಸೀನಾಯಿ ಪರ್ವತವು ಸಹ ಕಂಪಿಸಿತು.


ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ, ನೀವು ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವುದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನೈಲ್ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಈಜಿಪ್ಟಿನ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವುದು.


ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.


ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೊಲಗಿವೆ. ದ್ರಾಕ್ಷಿತೋಟಗಳಲ್ಲಿ ಕೀರ್ತನೆಗಳಾಗಲೀ, ಆರ್ಭಟವಾಗಲೀ ಇರುವದಿಲ್ಲ. ದ್ರಾಕ್ಷಿ ತೊಟ್ಟಿಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.


ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”


ಕಣಗಳು ಧಾನ್ಯದಿಂದ ತುಂಬುವುವು. ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು