ಆಮೋಸ 9:2 - ಕನ್ನಡ ಸಮಕಾಲಿಕ ಅನುವಾದ2 ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪಾತಾಳದವರೆಗೆ ತೋಡಿಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು; ಸ್ವರ್ಗದ ತನಕ ಹತ್ತಿದರೇನು, ಅಲ್ಲಿಂದಲೂ ಅವರನ್ನಿಳಿಸುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು. ಅಧ್ಯಾಯವನ್ನು ನೋಡಿ |