ಆಮೋಸ 9:3 - ಕನ್ನಡ ಸಮಕಾಲಿಕ ಅನುವಾದ3 ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು. ಅಧ್ಯಾಯವನ್ನು ನೋಡಿ |