Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:7 - ಕನ್ನಡ ಸಮಕಾಲಿಕ ಅನುವಾದ

7 “ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:7
14 ತಿಳಿವುಗಳ ಹೋಲಿಕೆ  

ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.


ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.


ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.


ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.


ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.


ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.


ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?


ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು.


ಹಾಗೆಯೇ ಅಸ್ಸೀರಿಯದ ಅರಸನು ಈಜಿಪ್ಟಿನವರನ್ನು ಬಂಧಿಸಿ, ಕೂಷಿನ ಕೈದಿಗಳನ್ನು ಅವರು ದೊಡ್ಡವರಾಗಲೀ, ಸಣ್ಣವರಾಗಲೀ ಬಟ್ಟೆ, ಕೆರಗಳಿಲ್ಲದೆ ಈಜಿಪ್ಟಿನ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಅದೇ ದಿನದಲ್ಲಿ ಯೆಹೋವ ದೇವರು ಇಸ್ರಾಯೇಲರನ್ನು ಅವರ ಸೈನ್ಯಗಳ ಪ್ರಕಾರ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದರು.


ಏಕೆಂದರೆ ನಾನೇ ನಿನ್ನ ಯೆಹೋವ ದೇವರೂ ನಿನ್ನ ದೇವರಾದ ಇಸ್ರಾಯೇಲಿನ ಪರಿಶುದ್ಧನೂ, ನಿನ್ನ ರಕ್ಷಕನೂ ಆಗಿದ್ದೇನೆ. ಈಜಿಪ್ಟನ್ನು ನಿನ್ನ ವಿಮೋಚನೆಗೂ, ಇಥಿಯೋಪಿಯ ಮತ್ತು ಸೆಬಾ ಸೀಮೆಗಳನ್ನು ನಿನಗೋಸ್ಕರ ಕೊಟ್ಟಿದ್ದೇನೆ.


ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.


ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು