Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 1:5 - ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ದೂತರೊಳಗೆ ಯಾರಿಗಾದರೂ ಹೀಗೆ ಎಂದಾದರೂ ಹೇಳಿದ್ದುಂಟೋ, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದೂ, “ನಾನು ಆತನ ತಂದೆಯಾಗಿರುವೆನು; ಆತನು ನನಗೆ ಮಗನಾಗಿರುವನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ. ಎಂತಲೂ ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು ಎಂತಲೂ ದೇವರು ತನ್ನ ದೂತರೊಳಗೆ ಯಾವನಿಗಾದರೂ ಎಂದಾದರೂ ಹೇಳಿದ್ದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಯಾವ ದೂತರಿಗೂ ಈ ಸಂಗತಿಗಳನ್ನು ಎಂದೂ ಹೇಳಿಲ್ಲ: “ನೀನು ನನ್ನ ಮಗ; ಈ ದಿನ ನಾನು ನಿನ್ನ ತಂದೆಯಾದೆನು.” ದೇವರು ದೂತನೊಬ್ಬನಿಗೆ ಎಂದೂ ಹೀಗೆ ಹೇಳಿಲ್ಲ: “ನಾನು ಅವನ ತಂದೆಯಾಗಿರುವೆನು, ಅವನು ನನ್ನ ಮಗನಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಪ್ನಾಚ್ಯಾ ದುತಾನಿತ್ಲ್ಯಾ ಕೊನಾಕ್‍ಬಿ, “ತಿಯಾ ಮಾಜೊ ಲೆಕ್ ; ಆಜ್ ಮಿಯಾ ತುಜೊ ಬಾಬಾ ಹೊಲಾ” ಮನುನ್ ಕನ್ನಾಚ್ ಮನುಕ್ ನಾ. ನಾಹೊಲ್ಯಾರ್ ದೆವ್ ಖಲ್ಯಾಬಿ ದೆವ್‍ದುತಾಚ್ಯಾ ವಿಶಯಾತ್,“ ಮಿಯಾ ತೆಜೊ ಬಾಬಾ ಹೊತಾ, ಅನಿ ತೊ ಮಾಜೊ ಲೆಕ್ ಹೊತಾ.” ಮನುನ್ ಮನುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 1:5
8 ತಿಳಿವುಗಳ ಹೋಲಿಕೆ  

ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.


ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “ ‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’


ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದು ಹೇಳಿದರು.


ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.


ನಾನು ಅವನ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನ ಮೇಲಿಂದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ.


ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.


ಇದಲ್ಲದೆ ದೇವರು ನನಗೆ, ‘ನಿನ್ನ ಮಗ ಸೊಲೊಮೋನನು ತಾನೇ ನನ್ನ ಆಲಯವನ್ನೂ, ನನ್ನ ಅಂಗಳಗಳನ್ನೂ ಕಟ್ಟಿಸುವನು. ಏಕೆಂದರೆ ಅವನನ್ನು ನನಗೆ ಮಗನಾಗಿರಲು ಆಯ್ದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು