ಇಬ್ರಿಯರಿಗೆ 10:1 - ಕನ್ನಡ ಸಮಕಾಲಿಕ ಅನುವಾದ1 ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಧರ್ಮಶಾಸ್ತ್ರದಲ್ಲಿ ಮುಂದೆ ಬರಬೇಕಾಗಿದ್ದ ಮೇಲುಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ವರುಷ ವರುಷಕ್ಕೆ ಪದೇ ಪದೇ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮೊಯ್ಜೆಚೆ ಖಾಯ್ದೆ ಫಿಡೆ ಯೆತಲ್ಯಾ ಬರ್‍ಯಾಪಾನಾಚಿ ಸಾವ್ಳಿ ಶಿವಾಯ್ ತೆಂಚೊ ಖರೊ ರುಪ್ ನ್ಹಯ್, ಪರ್ತುನ್ ಪರ್ತುನ್ ವರ್ಸಾ ಬಲಿ ದಿಲ್ಯಾರ್ಬಿ ತೆಚ್ಯಾ ವೈನಾ ದೆವಾಚೆ ಆರಾದನ್ ಕರ್‍ತಲ್ಯಾಕ್ನಿ ಸಂಪುರ್ನ್ ಕರುಕ್ ಖಾಯ್ದ್ಯಾಂಚಾನ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |