ಇಬ್ರಿಯರಿಗೆ 10:2 - ಕನ್ನಡ ಸಮಕಾಲಿಕ ಅನುವಾದ2 ಒಂದು ವೇಳೆ ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಪಾಪದಿಂದ ಶುದ್ಧೀಕರಣ ಹೊಂದಿದ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತಂದಿದ್ದ ಪಕ್ಷದಲ್ಲಿ ಆ ಯಜ್ಞ ಸಮರ್ಪಣೆಯು ನಿಂತುಹೋಗುತ್ತಿತ್ತಲ್ಲಾ. ಯಾಕಂದರೆ ದೇವಾರಾಧನೆ ಮಾಡುವವರು ಒಂದೇ ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಪಾಪವುಂಟೆಂದು ಅವರ ಮನಸ್ಸು ಇನ್ನೂ ಸಾಕ್ಷಿಕೊಡುವದು ಹೇಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆಂಚ್ಯಾ ಆರಾಧನ್ ಕರ್ತಲ್ಯಾ ದೆವಾನ್ ತೆಂಕಾ ಪಾಪಾತ್ನಾ ಪುರಾ ರಿತಿನ್ ಧುವ್ನ್ ಕಾಡಲ್ಲೆ ರ್‍ಹಾಲ್ಯಾರ್, ತೆನಿ ಬಲಿ ದಿತಲೆ ಮನುನ್ ತೆಂಚೊ ಮನ್ ಕಸೊ ಸಾಂಗುಕ್ ಹೊತಾ? ಅಧ್ಯಾಯವನ್ನು ನೋಡಿ |