Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:24 - ಕನ್ನಡ ಸಮಕಾಲಿಕ ಅನುವಾದ

24 ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಪ್ರೇರೇಪಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಬ್ಬರಿಗೊಬ್ಬರು ಹಿತಚಿಂತಕರಾಗಿರೋಣ. ಆಗ ಒಬ್ಬರಿಗೊಬ್ಬರು ಪ್ರೀತಿಯನ್ನು ತೋರ್ಪಡಿಸುವುದಕ್ಕೂ ಒಳ್ಳೆಯಕಾರ್ಯಗಳನ್ನು ಮಾಡುವುದಕ್ಕೂ ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಎಕಾಮೆಕಾಕ್ ಮಜತ್ ಕರುಸಾಟ್ನಿ, ಅನಿ ಪ್ರೆಮ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚಿ ಕಾಳ್ಜಿ ಕರುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:24
29 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಇದು ನಿಮಗೆ ನನ್ನ ಆಜ್ಞೆಯಲ್ಲ. ಆದರೆ ಇತರರಿಗೆ ನಿಮಗಿರುವ ಈ ಸೇವಾಕಾರ್ಯದ ಉತ್ಸಾಹವನ್ನೂ ನಮ್ಮ ಮೇಲಿರುವ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾಗಿದೆಯೆಂಬುದನ್ನೂ ಹೋಲಿಕೆಮಾಡಿ ಪರೀಕ್ಷಿಸಿನೋಡಲು ಬಯಸುತ್ತಿದ್ದೇನೆ.


ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.


ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ಅಖಾಯದಲ್ಲಿರುವ ನೀವು ಕಳೆದ ಒಂದು ವರ್ಷದಿಂದ ಉದಾರವಾಗಿ ದಾನ ಮಾಡಲು ಸಿದ್ಧರಾಗಿದ್ದೀರಿ ಎಂಬ ವಿಷಯವನ್ನು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಆಸಕ್ತಿಯನ್ನು ಕೇಳಿ ಮಕೆದೋನ್ಯದವರಲ್ಲಿ ಎಷ್ಟೋ ಮಂದಿ ಕಾರ್ಯರೂಪಕ್ಕೆ ಉತ್ತೇಜನಗೊಂಡಿರುತ್ತಾರೆ.


ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ಇದಲ್ಲದೆ ದೇವರ ವಾಕ್ಯವು ದೂಷಣೆಯಾಗದಂತೆ ಯೌವನ ಸ್ತ್ರೀಯರು ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ


ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ಬಲವಿಲ್ಲದವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲವೂ ಆದೆನು.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಅದಕ್ಕೆ ದೇವರು ಅವನಿಗೆ ಕೊಟ್ಟ ಉತ್ತರವೇನಾಗಿತ್ತು? “ಬಾಳನಿಗೆ ಅಡ್ಡಬೀಳದ ಏಳು ಸಾವಿರ ಮಂದಿಯನ್ನು ನನಗೋಸ್ಕರ ಉಳಿಸಿದ್ದೇನೆ,” ಎಂದಲ್ಲವೇ?


ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.


ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು