Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:8 - ಕನ್ನಡ ಸಮಕಾಲಿಕ ಅನುವಾದ

8 ಮೋಶೆಯ ನಿಯಮದ ಪ್ರಕಾರವಾಗಿ ಅರ್ಪಿಸಲಾಗುತ್ತಿದ್ದಂತೆಯೇ, “ಯಜ್ಞವೂ ಅರ್ಪಣೆಯೂ ದಹನಬಲಿಗಳೂ ಪಾಪ ಪರಿಹಾರದ ಬಲಿಯೂ ನಿಮಗೆ ಇಷ್ಟವಾಗಿರಲಿಲ್ಲ. ಅವುಗಳಲ್ಲಿ ನಿಮಗೆ ಸಂತೋಷವಿರಲಿಲ್ಲ,” ಎಂದು ಮೊದಲು ಅವರು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದ್ದುವಾದರೂ “ಬಲಿಯರ್ಪಣೆಗಳು, ಕಾಣಿಕೆಗಳು, ದಹನಬಲಿಗಳು ಮತ್ತು ಪಾಪಪರಿಹಾರಕಬಲಿಗಳು ನಿಮಗೆ ಬೇಡವಾದವು; ಇವು ಯಾವುವು ನಿಮಗೆ ತರಲಿಲ್ಲ ತೃಪ್ತಿಯನು,” ಎಂದು ಮೊದಲು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಧರ್ಮಶಾಸ್ತ್ರದ ಪ್ರಕಾರ ಸಮರ್ಪಣೆಯಾಗುತ್ತಾ ಬರುವ ಯಜ್ಞನೈವೇದ್ಯಗಳೂ ಸರ್ವಾಂಗಹೋಮಗಳೂ ದೋಷಪರಿಹಾರಕಯಜ್ಞಗಳೂ ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವದಿಲ್ಲ ಎಂದು ಮೇಲೆ ಹೇಳಿದ ತರುವಾಯ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆನಿ ಪೈಲೆ ಮಟ್ಲ್ಯಾನ್; “ಜನಾವರಾಂಚೆ ಸಗ್ಳೆ ಆಂಗ್ ಜಾಳ್ವುತಲೆ ಅನಿ ಪಾಪಾಂಚ್ಯಾ ಸುಟ್ಕಾ ಸಾಟ್ನಿ ಭೆಟ್ವುತಲಿ ಬಲಿಯಾ ತುಜ್ಯಾ ಮನಾಕ್ ಯೆವ್ಕನಾತ್” ಜಾಲ್ಯಾರ್‍ಬಿ ಹೆ ಸಗ್ಳೆ ಖಾಯ್ದ್ಯಾನ್ ಸಾಂಗಲೆ ಸಾರ್ಕೆ ಭೆಟ್ವುತಲಿ ಬಲಿಯಾ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:8
4 ತಿಳಿವುಗಳ ಹೋಲಿಕೆ  

ಆದ್ದರಿಂದ ಕ್ರಿಸ್ತ ಯೇಸು ಭೂಲೋಕದೊಳಗೆ ಬಂದಾಗ, “ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿ ಕೊಟ್ಟಿರುವೆ;


ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು