ಇಬ್ರಿಯರಿಗೆ 11:13 - ಕನ್ನಡ ಸಮಕಾಲಿಕ ಅನುವಾದ13 ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ದೆವಾನ್ ತ್ಯಾ ಲೊಕಾಕ್ನಿ ಗೊಸ್ಟ್ ದಿಲ್ಲೆ ಸಗ್ಳೆ ತೆನಿ ಘೆವ್ಕ್ ನಾತ್ ಲೈ ಎಳಾಚ್ಯಾ ಮಾನಾ ಯೆತಲೆ ಹೊತ್ತ್ಯೆ ಸಗ್ಳೆ ಬಗುನ್ ಸ್ವಾಗತ್ ಕರುನ್ ಖುಶಿ ಹೊಲ್ಯಾನಿ, ಅನಿ ತೆನಿ ಜಗಾರ್ ಪರ್ವಾಸಾಕ್ ಯೆಲ್ಲೆ ಅನಿ ಒಳಕ್ ನಸಲ್ಯಾಂಚ್ಯಾ ಸಾರ್ಕೆ ಹೊವ್ನ್ ಹಾತ್ ಮನ್ತಲೆ ಒಳ್ಕುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |