Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:16 - ಕನ್ನಡ ಸಮಕಾಲಿಕ ಅನುವಾದ

16 ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ತೆನಿ ಸರ್ಗ್ ಮನ್ತಲ್ಯಾ ಬರ್‍ಯಾ ದೆಶ್ಯಾಕ್ ಆಸ್ಯಾ ಕರ್‍ತಲಿ ಲೊಕಾ ತಸೆ ಹೊವ್ನ್, ತೆಂಚೊ ದೆವ್ ವಿಶ್ವಾಸಾನ್ ಅಪ್ನಾಚ್ಯಾ ಲೆಕಾಕ್ ಭೆಟ್ವುನ್ ದಿವ್ಕ್ ಲಾಗಲ್ಲೊ, ತೆಕಾ ಗೊಸ್ಟ್ ದಿವ್ನ್ ಹೊಲ್ಲಿ ಹೊತ್ತ್ಯೆ ಹೊಲ್ಯಾರ್ಬಿ ಅಪ್ನಾಚ್ಯಾ ಎಕ್ಲ್ಯಾಚ್ ಲೆಕಾಕ್ ಬಲಿ ಕರುನ್ ದಿವ್ಕ್ ತೊ ತಯಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:16
26 ತಿಳಿವುಗಳ ಹೋಲಿಕೆ  

ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ.


ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು.


ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.


ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ.


ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಇಂಥಾ ಸಂಗತಿಗಳನ್ನು ಹೇಳುವ ಜನರು ತಮ್ಮ ಸ್ವಂತ ದೇಶಕ್ಕಾಗಿ ಎದುರುನೋಡುತ್ತಿದ್ದರು.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.


ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.


‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’ ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ.


“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?


“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.


ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ಆದರೆ ಉರಿಯುವ ಪೊದೆಯ ಬಳಿ ಕರ್ತದೇವರು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು,’ ಎಂದು ತಿಳಿಸಿ ಸತ್ತವರು ಏಳುತ್ತಾರೆಂಬದನ್ನು ಮೋಶೆಗೆ ವ್ಯಕ್ತಪಡಿಸಿದ್ದಾರೆ.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ಏಕೆಂದರೆ ನಮ್ಮೊಂದಿಗೆ ಅವರು ಪರಿಪೂರ್ಣರಾಗಬೇಕೆಂದು ದೇವರು ನಮಗೋಸ್ಕರ ಉತ್ತಮವಾದದ್ದನ್ನು ಸಂಕಲ್ಪಿಸಿದ್ದಾರೆ.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು