Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:22 - ಕನ್ನಡ ಸಮಕಾಲಿಕ ಅನುವಾದ

22 ನಂಬಿಕೆಯಿಂದಲೇ ಯೋಸೇಫನು ಸಾಯುವಾಗ ಇಸ್ರಾಯೇಲರು ಹೊರಡುವುದನ್ನು ಕುರಿತು ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ವಿಶ್ವಾಸದಿಂದಲೇ ಜೋಸೆಫನು, ತಾನು ಸಾಯುವ ಗಳಿಗೆಯು ಸಮೀಪಿಸಿದಾಗ, ಇಸ್ರಯೇಲಿನ ಜನರು ಈಜಿಪ್ಟಿನಿಂದ ಹೊರಬರುವುದನ್ನು ಸೂಚಿಸಿದನು. ಅಲ್ಲದೆ, ತನ್ನ ಶವಸಂಸ್ಕಾರದ ಬಗ್ಗೆ ಆದೇಶ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೋಸೇಫನು ತೀರಿಹೋಗುವಾಗ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತಾಡಿ ತನ್ನ ಶವವನ್ನು ತಕ್ಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜುಜೆನ್ ಮರ್‍ತಲ್ಯಾ ವೆಳಾರ್ ಇಸ್ರಾಯೆಲ್ ಲೊಕಾ‌ ಇಜಿಪ್ತ್ ದೆಶ್ ಸೊಡುನ್ ಜಾತಾನಾ ಅಪ್ಲೆ ಮಡೆಬಿ ಘೆವ್ನ್ ಜಾವ್ಚೆ ಮನುನ್ ಸಾಂಗುನ್ ಥವಲ್ಲೆ ಬಿ ವಿಶ್ವಾಸಾನುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:22
5 ತಿಳಿವುಗಳ ಹೋಲಿಕೆ  

ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. ಏಕೆಂದರೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಜವಾಗಿಯೂ ನಿಮ್ಮ ಸಹಾಯಕ್ಕೆ ಬರುವರು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು,” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು.


ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.


ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.


ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು