Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:26 - ಕನ್ನಡ ಸಮಕಾಲಿಕ ಅನುವಾದ

26 ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಐಗುಪ್ತದೇಶದ ಸರ್ವೈಶ್ವರ್ಯಕ್ಕಿಂತಲೂ ಕ್ರಿಸ್ತನ ನಿವಿುತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು; ಯಾಕಂದರೆ ಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಇಜಿಪ್ತಾತ್ಲ್ಯಾ ಆಸ್ತಿಚಾನ್‍ಬಿ ಕ್ರಿಸ್ತಾಸಾಟಿ ಯೆತಲಿ ಲೊಕಾಂಚಿ ನಿಂದ್ಯಾಚ್ ಬರಿ ಮನುನ್ ಘೆಟ್ಲ್ಯಾನ್ ಕಶ್ಯಾಕ್ ಮಟ್ಲ್ಯಾರ್, ದೆವಾಕ್ನಾ ಯೆತಲ್ಯಾ ಪ್ರತಿ ಫಳಾಚ್ಯಾ ವೈರ್ ತೆನಿ ಡೊಳೊ ಥವಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:26
29 ತಿಳಿವುಗಳ ಹೋಲಿಕೆ  

ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ಏಕೆಂದರೆ ದೇವದೂತರ ಮೂಲಕ ಹೇಳಲಾದ ವಾಕ್ಯವೇ ದೃಢಪಡಿಸಲಾಯಿತು. ಆದ್ದರಿಂದ ಆ ವಾಕ್ಯವನ್ನು ಮೀರಿದವರಿಗೂ ಅವಿಧೇಯರಾದವರಿಗೂ ನ್ಯಾಯವಾದ ದಂಡನೆ ಕೊಡಲಾಯಿತು.


ದುಃಖ ಪಡುವವರಾಗಿದ್ದರೂ ಹರ್ಷಿಸುತ್ತಿದ್ದೆವು, ಬಡವರಾಗಿದ್ದಾಗಲೂ ಅನೇಕರನ್ನು ಐಶ್ವರ್ಯವಂತರನ್ನಾಗಿ ಮಾಡಿದೆವು, ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಾಗಿದ್ದೇವೆ.


ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


ದುಷ್ಟರ ಐಶ್ವರ್ಯಕ್ಕಿಂತ ನೀತಿವಂತರ ಅಲ್ಪವೇ ಲೇಸು.


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.


ಕೆಲವು ಸಾರಿ ನೀವು ನಿಂದೆಗಳನ್ನೂ ಉಪದ್ರವಗಳನ್ನೂ ಅನುಭವಿಸಿ ಬಹಿರಂಗ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸುವವರ ಭಾಗಿಗಳಾದಿರಿ.


ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.


ಪ್ರವಾದಿಯೆಂದು ಪ್ರವಾದಿಯನ್ನು ಸ್ವಾಗತಿಸುವವರು ಪ್ರವಾದಿಯ ಪ್ರತಿಫಲವನ್ನು ಪಡೆಯುವರು; ನೀತಿವಂತನೆಂದು ನೀತಿವಂತನನ್ನು ಸ್ವಾಗತಿಸುವವರು ನೀತಿವಂತನ ಪ್ರತಿಫಲವನ್ನು ಪಡೆಯುವರು.


“ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.


ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ಖಂಡಿತವಾಗಿಯೂ ನಿನಗೆ ಮುಂದಿನ ನಿರೀಕ್ಷೆಯಿದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.


ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ.


ನಾನು ನಿಮ್ಮ ನಿಮಿತ್ತ ನಿಂದೆಗೆ ಒಳಗಾಗಿದ್ದೇನೆ. ಅವಮಾನವು ನನ್ನ ಮುಖವನ್ನು ಮುಚ್ಚಿದೆ.


ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.


ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.


ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು