Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:29 - ಕನ್ನಡ ಸಮಕಾಲಿಕ ಅನುವಾದ

29 ನಂಬಿಕೆಯಿಂದಲೇ ಇಸ್ರಾಯೇಲರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿ ಮುಳುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ವಿಶ್ವಾಸಾನುಚ್ ಇಸ್ರಾಯೆಲ್ ಲೊಕಾ ತಾಂಬ್ಡೊ ಸಮುಂದರ್ ಸುಕ್ಕ್ಯಾ ಜಿಮ್ನಿರ್ ಚಲುನ್ ಗೆಲ್ಲ್ಯಾ ಸಾರ್ಕೆ ದಾಟುನ್ ಗೆಲ್ಲ್ಯಾನಿ, ತೆ ಬಗುನ್ ಅಪ್ನಿಬಿ ದಾಟುಕ್ ಜಾವ್ನ್ ಇಜಿಪ್ತಾಚಿ ಲೊಕಾ ಸಮುಂದರಾತ್ ಬುಡುನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:29
14 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.


ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.


ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ.


ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ


ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.


ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ಮೊದಲಿನಂತೆ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಯೆಹೋವ ದೇವರು ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು