Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:32 - ಕನ್ನಡ ಸಮಕಾಲಿಕ ಅನುವಾದ

32 ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮಿಯಾ ಅನಿಬಿ ತುಮ್ಕಾ ಕಾಯ್ ಸಾಂಗು? ಗಿದಿಯೊನ್, ಬಾರಾಕ್, ಸಾಮ್ಸಾವ್, ಎಫಥ್, ದಾವಿದ್, ಸಾಮುಯೆಲ್ ಮನ್ತಲ್ಯಾಂಚ್ಯಾ ಸಾಟ್ನಿ ಅನಿ ಪ್ರವಾದಿಂಚ್ಯಾ ಸಾಟ್ನಿಬಿ ಸುಟ್ವುನ್ ಸಾಂಗುಕ್ ಮಾಕಾ ವೆಳ್ ಪಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:32
38 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು.


ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.


ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ಹಾಗಾದರೆ ನಾವು ಏನು ಹೇಳೋಣ? ನಿಯಮವೇ ಪಾಪವಾಗಿದೆಯೋ? ಎಂದಿಗೂ ಇಲ್ಲ. ಆದರೂ ನಿಯಮವನ್ನು ಬಿಟ್ಟು ಬೇರಾವುದರ ಮೂಲಕವೂ ಪಾಪವೆಂದರೆ ಏನೆಂದು ನನಗೆ ತಿಳಿದುಕೊಳ್ಳಲು ಸಾಧ್ಯವಿರಲಿಲ್ಲ. ನಿಯಮವು, “ದುರಾಶೆ ಪಡಬೇಡ,” ಎಂದು ಹೇಳದೆ ಇರುತ್ತಿದ್ದರೆ ದುರಾಶೆ ಎಂದರೆ ಏನೆಂದು ನಾನು ತಿಳಿಯಲು ಸಾಧ್ಯವಿರಲಿಲ್ಲ.


ಹಾಗಾದರೆ ವಂಶಾನುಕ್ರಮವಾಗಿ ನಮ್ಮ ಮೂಲ ಪಿತೃವಾಗಿರುವ ಅಬ್ರಹಾಮನು, ಈ ವಿಷಯದಲ್ಲಿ ಏನು ಕಂಡುಕೊಂಡನೆಂದು ಹೇಳಬೇಕು?


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ಇದಕ್ಕೆ ನಾನೂರ ಐವತ್ತು ವರ್ಷಗಳ ಕಾಲ ಹಿಡಿಯಿತು. “ಇದಾದನಂತರ, ದೇವರು ಅವರಿಗೆ ಪ್ರವಾದಿ ಸಮುಯೇಲನ ಸಮಯದವರೆಗೆ ನ್ಯಾಯಸ್ಥಾಪಕರನ್ನು ದಯಪಾಲಿಸಿದರು.


ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


“ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.


ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.


ನನ್ನ ಪ್ರಿಯರೇ, ಕರ್ತದೇವರ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯವಾಗಿ ಆದರ್ಶವಾಗಿ ಇಟ್ಟುಕೊಳ್ಳಿರಿ.


ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ?


“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”


“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.


ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.


ಬಾಲಕನಾದ ಸಮುಯೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಯೆಹೋವ ದೇವರ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದನು.


ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು. ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಯೆಹೋವ ದೇವರ ಸೇವೆ ಮಾಡುತ್ತಿದ್ದನು.


ಆ ಸ್ತ್ರೀಯು ಮಗನನ್ನು ಹೆತ್ತು, ಅವನಿಗೆ ಸಂಸೋನ ಎಂದು ಹೆಸರಿಟ್ಟಳು. ಆ ಹುಡುಗನು ಬೆಳೆದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.


ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.


ಏಹೂದನು ಮರಣಹೊಂದಿದನಂತರ ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು.


ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.


ಯೆಹೋವ ದೇವರು ಅವನನ್ನು ದೃಷ್ಟಿಸಿ ನೋಡಿ, “ನಿನಗಿರುವ ಈ ಶಕ್ತಿಯಲ್ಲಿ ಹೋಗು, ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸುವೆ; ನಾನು ನಿನ್ನನ್ನು ಕಳುಹಿಸಲಿಲ್ಲವೋ?” ಎಂದರು.


ಸಂಸೋನನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರ್ಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.


“ಪರಾಕ್ರಮಶಾಲಿಗಳ ಬಿಲ್ಲುಗಳು ಮುರಿದು ಬಿದ್ದಿವೆ, ಎಡವಿದವರು ಬಲದಿಂದ ನಡುಕಟ್ಟಿ ನಿಂತಿದ್ದಾರೆ.


ದಾವೀದನು ಫಿಲಿಷ್ಟಿಯನಿಗೆ, “ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು