ಇಬ್ರಿಯರಿಗೆ 11:5 - ಕನ್ನಡ ಸಮಕಾಲಿಕ ಅನುವಾದ5 ನಂಬಿಕೆಯಿಂದಲೇ ಹನೋಕನು ಮರಣ ಹೊಂದದೆ, ಒಯ್ಯಲಾದನು. “ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.” ಅವನು ಒಯ್ಯಲಾಗುವುದಕ್ಕಿಂತ ಮುಂಚೆ ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿಹೊಂದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹನೋಕನು ಮರಣವನ್ನು ಅನುಭವಿಸದೆ ಒಯ್ಯಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರಿಗೆ ಮೆಚ್ಚಿಕೆಯಾದವನಾಗಿದ್ದನೆಂದು ಸಾಕ್ಷಿ ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ವಿಶ್ವಾಸಾನುಚ್ ಹನೊಕಾಕ್ ಮರಾನ್ ನಸ್ತಾನಾ ದೆವಾನ್ ವೈರ್ ಉಕ್ಲುನ್ ನ್ಹೆಲ್ಯಾನ್, ತೆಕಾ ದೆವಾನ್ ಘೆವ್ನ್ ಗೆಲ್ಲ್ಯಾಸಾಟ್ನಿ ತೊ ಕೊನಾಕ್ಬಿ ಗಾವ್ಕ್ ನಾ; ತೊ ದೆವಾಕ್ನಾ ನ್ಹೆವ್ನ್ ಹೊವ್ಚ್ಯಾ ಪೈಲೆ ದೆವಾಕ್ ಮೆಚ್ಕಿಚೊ ಮಾನುಸ್ ಹೊವ್ನ್ ಹೊತ್ತೊ ಮನ್ತಲೆ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್. ಅಧ್ಯಾಯವನ್ನು ನೋಡಿ |