ಇಬ್ರಿಯರಿಗೆ 11:6 - ಕನ್ನಡ ಸಮಕಾಲಿಕ ಅನುವಾದ6 ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಹೊಲ್ಯಾರ್ ವಿಶ್ವಾಸ್ ನಸ್ತಾನಾ ದೆವಾಕ್ ಮಾನ್ವುಕ್ ಹೊಯ್ನಾ, ದೆವಾಚ್ಯಾ ಜಗೊಳ್ ಯೆತಲೆ ದೆವ್ ಹಾಯ್ ಅನಿ ಅಪ್ನಾಕ್ ಹುಡಕ್ತಲ್ಯಾಕ್ನಿ ಪ್ರತಿ ಫಳ್ ದಿತಾ ಮನುನ್ ವಿಶ್ವಾಸ್, ಕರುಕ್ ಪಾಜೆ. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.