Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:7 - ಕನ್ನಡ ಸಮಕಾಲಿಕ ಅನುವಾದ

7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ವಿಶ್ವಾಸಾನುಚ್ ನೊಯೆನ್ ತವ್ಡ್ಯಾ ಪತರ್ ದಿಸಿನಸ್ತಾನಾ ಹೊತ್ತ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ದೆವಾಕ್ನಾ ಸಾಂಗ್ನಿ ಘೆವ್ನ್ ಭಕ್ತಿನ್ ಅಪ್ಲ್ಯಾ ಘರ್‍ಚ್ಯಾ ಲೊಕಾಂಚ್ಯಾ ರಾಕನಿ ಸಾಟ್ನಿ ಢೊನ್ ಬಾಂದ್ಲ್ಯಾನ್, ಅನಿ ಲೊಕಾಕ್ನಿ ಸಗ್ಳ್ಯಾಕ್ನಿ ಶಿಕ್ಷಾತ್ ಪಡ್ತಲೆ ಹೊಲ್ಲೆ ಮನುನ್ ದಾಕ್ವುನ್ ವಿಶ್ವಾಸಾಚೆ ಫಳ್ ಘೆವ್ಕ್ ಗುರಿ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:7
41 ತಿಳಿವುಗಳ ಹೋಲಿಕೆ  

ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.


ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ.


“ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.


ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.


ಹೀಗೆ ಮನುಷ್ಯರು, ಪಶುಪಕ್ಷಿ, ಕ್ರಿಮಿಕೀಟಗಳು, ಭೂಮಿಯ ಮೇಲಿದ್ದ ಎಲ್ಲಾ ಜೀವರಾಶಿಗಳೂ ನಾಶವಾಯಿತು. ಅವು ಭೂಮಿಯ ಮೇಲಿಂದ ಅಳಿದುಹೋದವು. ನೋಹನು ಮತ್ತು ಅವನ ಸಂಗಡ ನಾವೆಯಲ್ಲಿದ್ದವರು ಮಾತ್ರ ಜೀವಂತವಾಗಿ ಉಳಿದರು.


ಈ ಜಲದಿಂದ ಆ ಸಮಯದಲ್ಲಿ ಜಗತ್ತು ಪ್ರಳಯದಲ್ಲಿ ನಾಶವಾಯಿತು.


ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.


ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು.


ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ.


ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.


ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ನೋಹನು ಎಲ್ಲವನ್ನೂ ಮಾಡಿದನು.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


“ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ.


ದೇವರು ಆಜ್ಞಾಪಿಸಿದ ಪ್ರಕಾರವೇ ನೋಹನು ಎಲ್ಲವನ್ನು ಮಾಡಿದನು.


ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.


ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.


ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಹೀಗೆ ಅವಳು ಅವನನ್ನು ಬಿಟ್ಟು ಹೋಗಿ, ತಾನೂ, ತನ್ನ ಪುತ್ರರೂ ಬಾಗಿಲು ಮುಚ್ಚಿದರು. ಇವರು ಅವಳ ಬಳಿಗೆ ಪಾತ್ರೆಗಳನ್ನು ತೆಗೆದುಕೊಂಡು ಬಂದರು. ಅವಳು ಎಣ್ಣೆಯನ್ನು ಅವುಗಳಲ್ಲಿ ಹೊಯ್ದಳು.


ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು