Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:9 - ಕನ್ನಡ ಸಮಕಾಲಿಕ ಅನುವಾದ

9 ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ಅವನು ಪ್ರವಾಸಿಗನಂತೆ ವಾಸಮಾಡಿದ್ದು ನಂಬಿಕೆಯಿಂದಲೇ. ಅದೇ ವಾಗ್ದಾನಕ್ಕೆ ಸಹ ಭಾದ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ವಿಶ್ವಾಸಾನುಚ್ ದೆವಾನ್ ಸಾಂಗಲ್ಲ್ಯಾ ದೆಶ್ಯಾಕ್ ಯೆಲ್ಯಾ ತನ್ನಾ ಥೈ ದುಸ್ರ್ಯಾ ದೆಶಾತುಚ್ ಹೊತ್ತ್ಯಾ ಸಾರ್ಕೊಚ್ ಝೊಪ್ಡೆ ಬಾಂದುನ್ ಘೆವ್ನ್ ಪರ್ವಾಸಾಕ್ ಯೆಲ್ಲ್ಯಾ ಮಾನ್ಸಾ ಸಾರ್ಕೊ ಹೊವ್ನ್ ಜಿವನ್ ಕರ್ಲ್ಯಾನ್, ತೆಜಿ ಲೆಕಾ ಇಸಾಕ್ ಅನಿ ಜಾಕೊಬಾನ್ಬಿ ತೆಚ್ಯಾ ಸಾರ್ಕೆಚ್ ಬಿಡಾರಾತ್ನಿಚ್ ಜಿವನ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:9
22 ತಿಳಿವುಗಳ ಹೋಲಿಕೆ  

ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.


ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.


ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.


ಅವನು ತನ್ನ ಪ್ರಯಾಣಗಳಲ್ಲಿ ನೆಗೆವದಿಂದ ಬೇತೇಲಿಗೆ, ಎಂದರೆ ಮೊದಲು ಬೇತೇಲಿಗೂ ಆಯಿ ಎಂಬ ಊರಿಗೂ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೆ ಬಂದನು.


ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.


ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು.


“ನಾನು ನಿಮ್ಮೊಂದಿಗೆ ಪರದೇಶಸ್ಥನೂ, ಪರವಾಸಿಯೂ ಆಗಿದ್ದೇನೆ. ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ. ಆಗ ನನ್ನ ಹೆಂಡತಿಯ ಶವವನ್ನು ಹೂಳಿಡುವೆನು,” ಎಂದನು.


ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ಏಕೆಂದರೆ ಅವರ ಸಂಪತ್ತು ಅವರು ಕೂಡಿ ಇರುವುದಕ್ಕೆ ಆಗದಷ್ಟು ಅಭಿವೃದ್ಧಿಯಾಗಿತ್ತು. ಅವರ ಪಶುಪ್ರಾಣಿಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.


ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು.


ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.


ಮನೆ ಕಟ್ಟಬೇಡಿರಿ, ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷಿತೋಟವನ್ನು ನೆಡಬೇಡಿರಿ, ಅಂಥದ್ದು ನಿಮಗಿರಬಾರದು. ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿವಸಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.


ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುಕಾಲ ತಂಗಿದ್ದನು.


ತರುವಾಯ ಲಾಬಾನನು ಯಾಕೋಬನನ್ನು ಸಂಧಿಸಿದಾಗ, ಯಾಕೋಬನು ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ಅಲ್ಲಿಯೇ ಗುಡಾರವನ್ನು ಹಾಕಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು