Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:1 - ಕನ್ನಡ ಸಮಕಾಲಿಕ ಅನುವಾದ

1 ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1-2 ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಮ್ಚ್ಯಾ ಭೊತ್ಯಾನಿ ವಿಶ್ವಾಸಾತ್ ಹೊತ್ತಿ ಉಲ್ಲಿ ಲೊಕಾ ಹಾತ್ ತೆಂಚೆ ಜಿವನಾತ್ ವಿಶ್ವಾಸಾತ್ ಕಾಯ್ ಮನುನ್ ಸಾಕ್ಷಿ ಸಾಂಗ್ತಾ, ಅಮಿ ತೆಚಾ ಸಾರ್ಕೆ ರ್‍ಹಾವ್ಚೆ ಅಮಿ ಕರುಚೆ ಮನುನ್ ಕರಲ್ಲೆ ಇಬೆ ರ್‍ಹಾಯ್ ನಸ್ತಾನಾ ಪಳುಚೆ ಅಮ್ಕಾ ಅಡ್ ಕರ್‍ತಲಿ ಸಂಗತ್ ಸಗ್ಳಿ ಅಮ್ಚ್ಯಾ ಜಿವನಾತ್ನಾ ಕಾಡುನ್ ಟಾಕುಚೆ ಅಮ್ಕಾ ಧರ್‍ತಲ್ಲ್ಯಾ ಪಾಪಾಕ್ನಾ ಅಮಿ ಸೊಡ್ವುನ್ ಘೆವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:1
52 ತಿಳಿವುಗಳ ಹೋಲಿಕೆ  

ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು?


ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.


ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.


ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಪಡೆದುಕೊಂಡನು.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.


ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.


ಮೇಘದಂತೆಯೂ, ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.


“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.


ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.


ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು.


ಪ್ರವಾದಿಗೆ ತನ್ನ ಸ್ವದೇಶದಲ್ಲಿ ಮರ್ಯಾದೆ ಇಲ್ಲವೆಂದು ಯೇಸು ತಾವೇ ಹೇಳಿದ್ದರು.


ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ನೀವು ನನ್ನಲ್ಲಿ ಕಂಡು, ಈಗ ನನ್ನಲ್ಲಿರುವುದೆಂದು ಕೇಳುತ್ತಿರುವ ಅದೇ ಹೋರಾಟದ ಅನುಭವವೇ ನಿಮಗೂ ಇದೆ.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?


ಅವನು ತನ್ನ ಮೇಲಂಗಿಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು