Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:2 - ಕನ್ನಡ ಸಮಕಾಲಿಕ ಅನುವಾದ

2 ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜುಚ್ಯಾ ಸಾರ್ಕೆ ಅಮಿ ಚಲುಚೆ ಅಮ್ಚ್ಯಾ ವಿಶ್ವಾಸಾಚ್ಯಾ ವರ್ತಿ ಅನಿ ಫುರಾ ಕರ್ತಲೊ ವಾಡ್ವುನ್ ದಿತಲೊ ತೊ ತೆಚಾ ವರ್ತಿ ಥವಲ್ಲಿ ಕುಶಿ ಸಾಟ್ನಿ ಮರ್ಯಾದಿಕ್ ಬಗಿನಸ್ತಾನಾ ಕುರ್ಸಾಚೆ ಮರಾನ್ ತಾಳುನ್ ಘೆಟ್ಲ್ಯಾನ್, ಅತ್ತಾ ತೊ ದೆವಾಚ್ಯಾ ಸಿವಾಸನಾಚ್ಯಾ ಉಜ್ವ್ಯಾಕ್ಡೆ ಬಸಲ್ಲೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:2
78 ತಿಳಿವುಗಳ ಹೋಲಿಕೆ  

ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.


“ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಆಗ ಅಪೊಸ್ತಲರು ಕರ್ತದೇವರಿಗೆ, “ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದರು.


ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.


ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು.


ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.


ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು.


ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ಏಕೆಂದರೆ ಕ್ರಿಸ್ತ ಯೇಸುವು ಒಂದೇ ಬಲಿ ಅರ್ಪಣೆಯಿಂದ ಪವಿತ್ರವಾಗುವವರನ್ನು ನಿರಂತರ ಪರಿಪೂರ್ಣರನ್ನಾಗಿ ಮಾಡಿದ್ದಾರೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ಕಾಣುವನೆಂದು ಆನಂದಿಸಿದನು ಮತ್ತು ಅದನ್ನು ಕಂಡು ಉಲ್ಲಾಸಪಟ್ಟನು,” ಎಂದು ಹೇಳಿದರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಆಗ ಹೆರೋದನು ತನ್ನ ಸೈನಿಕರೊಂದಿಗೆ ಯೇಸುವನ್ನು ತಿರಸ್ಕರಿಸಿ, ಹಾಸ್ಯಮಾಡಿ, ಅವರ ಮೇಲೆ ರಾಜವಸ್ತ್ರವನ್ನು ಹೊದಿಸಿ ಅವರನ್ನು ತಿರುಗಿ ಪಿಲಾತನ ಬಳಿಗೆ ಕಳುಹಿಸಿದನು.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.


ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?


“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,


ಕೆಲವು ಸಾರಿ ನೀವು ನಿಂದೆಗಳನ್ನೂ ಉಪದ್ರವಗಳನ್ನೂ ಅನುಭವಿಸಿ ಬಹಿರಂಗ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸುವವರ ಭಾಗಿಗಳಾದಿರಿ.


ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.


ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.


ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು.


ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.


ಹೀಗೆ, “ಆತನನ್ನು ಅಪರಾಧಿಗಳೊಂದಿಗೆ ಸೇರಿಸಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು