Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:13 - ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ನಾವು ಆತನ ನಿವಿುತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮಿಬಿ ತೆಚೊ ಅವ್ಮಾನ್ ವಾವುನ್ ಘೆವ್ನ್ ಶಾರಾಚ್ಯಾ ಭಾಯ್ರ್ ತೆಚ್ಯಾಕ್ಡೆ ಜಾಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:13
16 ತಿಳಿವುಗಳ ಹೋಲಿಕೆ  

ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.


ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.


ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.


ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.


ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ, ಇನ್ನೂ ರಕ್ತವನ್ನು ಸುರಿಸುವಷ್ಟು ಅದನ್ನು ಎದುರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು