Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:14 - ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಕೆಂದರೆ, ಇಹದಲ್ಲಿ ಶಾಶ್ವತವಾದ ನಗರವು ನಮಗಿಲ್ಲ. ಬರಲಿರುವ ನಗರವನ್ನು ನಾವು ಎದುರುನೋಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಕಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ; ಇನ್ನು ಮುಂದೆ ಆಗುವ ಪಟ್ಟಣವನ್ನು ಹಾರೈಸುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಲೋಕದಲ್ಲಿ ಶಾಶ್ವತವಾಗಿರುವ ನಗರವೇ ಇಲ್ಲ. ಆದರೆ ನಾವು ಮುಂದೆ ಬರುವ ನಗರಕ್ಕಾಗಿ ಕಾಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶ್ಯಾಕ್ ಮಟ್ಲ್ಯಾರ್, ಹಿತ್ತೆ ಅಮ್ಕಾ ಶಾಸ್ವಿತ್ ಶಾರ್ ನಾ, ಖರೆ ಯೆತಲೆ ಹಾಯ್ ತ್ಯಾ ಶಾರಾಚಿ ವಾಟ್ ಬಗಿತ್ ಹಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:14
18 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶದವರೂ ಆಗಿರದೆ ದೇವಜನರೊಂದಿಗೆ ಜೊತೆ ನಾಗರಿಕರೂ ದೇವರ ಮನೆಯವರೂ ಆಗಿದ್ದೀರಿ.


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ


ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.


ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ.


ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


“ಇನ್ನೂ ಒಂದು ಸಾರಿ,” ಎಂಬ ಮಾತು ನಿರ್ಮಿತವಾಗಿರುವ ಕದಲುವ ವಸ್ತುಗಳು ತೆಗೆದುಹಾಕಲಾಗುವುದು ಎಂದೂ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿರುವುದು ಎಂಬುದನ್ನು ಸೂಚಿಸುತ್ತದೆ.


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು