Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:15 - ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆ ಹೊಲ್ಯಾರ್ ಜೆಜುಚ್ಯಾ ವೈನಾ ದೆವಾಕ್ ಹೊಗ್ಳಾಪ್ ದಿತಲಿ ಬಲಿ ಅಮಿ ಸದ್ದಿಚ್ ಭೆಟ್ವುವಾ, ಹಿಚ್ ತೆಚೆ ನಾವ್ ಒಪ್ಪುನ್ ಘೆಟಲ್ಲ್ಯಾಂಚ್ಯಾ ಹೊಟ್ಟಾಂಚಿ ಉಪ್ಕಾರ್ ಸ್ತುತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:15
42 ತಿಳಿವುಗಳ ಹೋಲಿಕೆ  

“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಯೆಹೋವ ದೇವರ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ಸಮಾಧಾನದ ಬಲಿಗಳನ್ನೂ, ಸ್ತೋತ್ರದ ಬಲಿಗಳನ್ನೂ ಅರ್ಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿದನು.


ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”


“ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.


ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಯೆಹೋವ ದೇವರಿಗೆ ಧನ್ಯವಾದ ಸಲ್ಲಿಸು.


ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.


ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.


ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ಸ್ತುತಿ ಮಾಡುವ ಎರಡು ಗುಂಪುಗಳೂ, ನಾನೂ, ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಿಗಳೂ ದೇವರ ಆಲಯದಲ್ಲಿ ನಿಂತಿದ್ದೆವು.


ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ಯೆಹೋವ ದೇವರೇ, ನನ್ನ ಬಾಯಿಂದ ಸಿದ್ಧಮನಸ್ಸಿನ ಸ್ತೋತ್ರಗಳನ್ನು ಸ್ವೀಕರಿಸಿರಿ, ನಿಮ್ಮ ನಿಯಮಗಳನ್ನು ನನಗೆ ಬೋಧಿಸಿರಿ.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ”


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.


ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು