Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:17 - ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಮ್ಚ್ಯಾ ವಡ್ಲಾಕ್ನಿ ಖಾಯ್ಲ್ ಹೊವಾ, ಅನಿ ತೆಂಚಿ ಗೊಸ್ಟ್ ಆಯ್ಕಾ, ತುಮ್ಚ್ಯಾ ಆತ್ಮ್ಯಾಂಚೆ ತುಮಿ ಲೆಕ್ ದಿವ್ಕ್ ಪಾಜೆ; ತಸೆ ಮನುನ್ ತುಮ್ಚ್ಯಾ ವಿಶಯಾತ್ ತೆನಿ ಕನ್ನಾಬಿ ಹುಶಾರ್ಕಿಕ್ ರ್‍ಹಾತ್ಯಾತ್. ತೆಂಚಿ ಜವಾಬ್ದಾರಿ ತೆನಿ ಕುಶಿನ್ ಪಾಳಿ ಸಾರ್ಕೆ ತುಮಿ ಚಲಾ ತೆಂಕಾ ತುಮಿ ಚಿಂತಾತ್ ಘಾಟ್ಲ್ಯಾರ್ ತೆ ತುಮ್ಕಾಚ್ ವಾಯ್ಟಾಕ್ ಕಾರನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:17
34 ತಿಳಿವುಗಳ ಹೋಲಿಕೆ  

ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಪ್ರಿಯರೇ, ನೀವು ಇಂಥವರಿಗೂ ಈ ಸೇವೆಯಲ್ಲಿ ಅವರೊಂದಿಗೆ ಪ್ರಯಾಸಪಡುವವರಿಗೂ ವಿಧೇಯರಾಗಿರಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ಹೀಗೆ ಮೋಶೆಯು ಯೆಹೋವ ದೇವರ ಬಳಿಗೆ ತಿರುಗಿ ಹೋಗಿ, “ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.


ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.


ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.


ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.


ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.


ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.


ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.


ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಆನಂದದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.


ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು.


ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ. ನನ್ನ ಉಪದೇಶಕರಿಗೆ ನಾನು ಕಿವಿಗೊಡದೆ ಹೋದೆ.


ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು.


ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು.


ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.


ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.


“ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ನಾನು ಬಂದು ದೇಶದ ಮೇಲೆ ಯಾವಾಗ ಖಡ್ಗವನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು