Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:24 - ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮ್ಮ ಸಭಾನಾಯಕರೆಲ್ಲರಿಗೂ ದೇವಜನರೆಲ್ಲರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿಮ್ಮ ಸಭಾನಾಯಕರಿಗೆಲ್ಲ ಮತ್ತು ದೇವಜನರಿಗೆಲ್ಲ ನಮ್ಮ ವಂದನೆಗಳನ್ನು ತಿಳಿಸಿ. ಇಟಲಿಯ ದೇವಜನರೆಲ್ಲರೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಸಗ್ಳ್ಯಾ ತುಮ್ಚ್ಯಾ ಫಿಡಾರ್‍ಯಾಕ್ನಿ ಅನಿ ದೆವಾಚ್ಯಾ ಲೊಕಾಕ್ನಿ ಮಾಜೊ ನಮಸ್ಕಾರ್ ಸಾಂಗ್ತಾ, ಅಮ್ಚಿ ಇಟಲಿ ದೆಶಾಚಿ ಭಾವಾ ಅನಿ ಭೆನಿಯಾ ತುಮ್ಕಾ ನಮಸ್ಕಾರ್ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:24
14 ತಿಳಿವುಗಳ ಹೋಲಿಕೆ  

ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ಏಕೆಂದರೆ, ನಮ್ಮ ಕರ್ತ ಆಗಿರುವ ಯೇಸುವಿನಲ್ಲಿ ನಿನಗಿರುವ ವಿಶ್ವಾಸವನ್ನೂ ಪರಿಶುದ್ಧರೆಲ್ಲರಿಗಾಗಿ ನಿನಗಿರುವ ಪ್ರೀತಿಯನ್ನೂ ಕುರಿತು ನಾನು ಕೇಳಿದ್ದೇನೆ.


ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.


ದೇವಜನರೆಲ್ಲರೂ ನಿಮಗೆ ತಮ್ಮ ವಂದನೆಗಳನ್ನು ತಿಳಿಸಿದ್ದಾರೆ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.


ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ.


ಪ್ರಿಯರೇ, ನೀವು ಇಂಥವರಿಗೂ ಈ ಸೇವೆಯಲ್ಲಿ ಅವರೊಂದಿಗೆ ಪ್ರಯಾಸಪಡುವವರಿಗೂ ವಿಧೇಯರಾಗಿರಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು