Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:3 - ಕನ್ನಡ ಸಮಕಾಲಿಕ ಅನುವಾದ

3 ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಬಂಧಿಖಾನ್ಯಾತ್ ಹೊತ್ತ್ಯಾಂಚಿ ಯಾದ್ ಥವಾ; ತೆಂಚ್ಯಾ ವಾಂಗ್ಡಾ ತುಮಿಬಿ ಬಂಧಿಖಾನ್ಯಾತ್ ಹಾಶಿ ಮನುನ್ ಚಿಂತಾ, ತರಾಸಾತ್ ಪಡಲ್ಲ್ಯಾಂಚಿ ಯಾದ್ ಕರಾ, ತೆಂಚೆ ವರ್ತಿ ಯೆಲ್ಲ್ಯಾ ಸಾರ್ಕೆ ಕಸ್ಟಾ ಸಂಕಟಾ ತುಮ್ಚ್ಯಾ ವರ್‍ತಿಬಿ ಯೆತಿಲ್ ಮನುನ್ ಚಿಂತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:3
19 ತಿಳಿವುಗಳ ಹೋಲಿಕೆ  

ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು.


ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.


ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.


ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು