Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:1 - ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾಸಾಟ್ನಿ, ಅಮಿ ಆಯ್ಕಲ್ಲ್ಯಾ ಖಬ್ರೆ ವರ್ತಿ ಅಮಿ ವಿಶೆಸ್ ಗಮನ್ ದಿವ್ಕ್ ಪಾಜೆ, ನಾಹೊಲ್ಯಾರ್, ಅಮಿ ಅಮ್ಚ್ಯಾ ವಾಟೆ ವೈನಾ ಧುರ್ ಹೊತಲೊ ಸಂಭವ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:1
25 ತಿಳಿವುಗಳ ಹೋಲಿಕೆ  

ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.


ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.


ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ, ನಿನ್ನ ಕಣ್ಣುಗಳಿಂದ ಅವು ತಪ್ಪಿಹೋಗದೆ ಇರಲಿ.


ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.


ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.


ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.


ಕಣ್ಣುಗಳಿದ್ದೂ ನೀವು ಕಾಣುವುದಿಲ್ಲವೋ? ಕಿವಿಗಳಿದ್ದೂ ನೀವು ಕೇಳುವುದಿಲ್ಲವೋ?


ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ, ಎಷ್ಟು ಬುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.


“ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.


ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು