ಇಬ್ರಿಯರಿಗೆ 2:11 - ಕನ್ನಡ ಸಮಕಾಲಿಕ ಅನುವಾದ11 ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾಕಂದರೆ ಪವಿತ್ರ ಮಾಡುವಾತನಿಗೂ ಪವಿತ್ರರಾಗುವವರೆಲ್ಲರಿಗೂ ಒಬ್ಬನೇ ತಂದೆ ಇದ್ದಾನೆ. ಈ ಕಾರಣದಿಂದ ಪವಿತ್ರ ಮಾಡುವಾತನು ಪವಿತ್ರರಾಗುವವರನ್ನು ಸಹೋದರರೆನ್ನುವದಕ್ಕೆ ನಾಚಿಕೆಪಡದೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಕರ್‍ತಲ್ಯಾಚೊ, ಅನಿ ಪವಿತ್ರ್ ಹೊಲ್ಲ್ಯಾಂಚೊ ಸಗ್ಳ್ಯಾಂಚೊ ಬಾಬಾ ಎಕ್ಲೊಚ್, ತೆಚ್ಯಾ ಸಾಟಿಚ್ ಸಗ್ಳ್ಯಾಕ್ನಿ ಅಪ್ನಾಚ್ಯಾ ಕುಟ್ಮಾಚೆ ಮನುಕ್ ಜೆಜು ಲಜಿನಾ. ಅಧ್ಯಾಯವನ್ನು ನೋಡಿ |