Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:13 - ಕನ್ನಡ ಸಮಕಾಲಿಕ ಅನುವಾದ

13 ಎಂದೂ ಪುನಃ, “ನಾನು ದೇವರ ಮೇಲೆ ಭರವಸೆ ಇಡುವೆನು.” ಎಂದೂ ಪುನಃ, “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ದೇವರಲ್ಲಿ ಭರವಸೆಯಿಡುವೆನು ನಾನು,” ಎಂದೂ “ಇಗೋ, ಇರುವೆವು ನಾನು ಮತ್ತು ದೇವರೆನಗಿತ್ತ ಕುವರರು,” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನೂ ದೇವರ ಮೇಲೆ ಭರವಸವಿಟ್ಟವನಾಗಿರುವೆನು ಎಂತಲೂ ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ ಎಂತಲೂ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ಮತ್ತೆ ಹೇಳುತ್ತಾನೆ: “ನಾನು ದೇವರಲ್ಲಿ ಭರವಸೆ ಇಡುತ್ತೇನೆ.” ಆತನು ಹೇಳುತ್ತಾನೆ: “ನಾನಿಲ್ಲಿದ್ದೇನೆ. ದೇವರು ನನಗೆ ದಯಪಾಲಿಸಿರುವ ಮಕ್ಕಳು ನನ್ನೊಂದಿಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ಎಗ್ದಾ ತೊ ಮನ್ತಾ, “ಮಾಜೊ ಪುರಾ ವಿಶ್ವಾಸ್ ಮಿಯಾ ತೆಚ್ಯಾ ವರ್ತಿ ಥವ್ತಾ”, ಅನಿ ಬಿ ಎಗ್ದಾ ಮಿಯಾ ತೆಚ್ಯಾ ವರ್ತಿ ಥವ್ತಾ. ಅನಿ ಬಿ ಎಗ್ದಾ ಮಿಯಾ ಅನಿ ದೆವಾನ್ ಮಾಕಾ ದಿಲ್ಲಿ ಪೊರಾ ಬಗ್! ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:13
16 ತಿಳಿವುಗಳ ಹೋಲಿಕೆ  

ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.


ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು.


“ನನ್ನ ಆಶ್ರಯವೂ, ನನ್ನ ಕೋಟೆಯೂ, ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು.”


ಅದಕ್ಕೆ ಯೋಸೇಫನು ತನ್ನ ತಂದೆಗೆ, “ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಪುತ್ರರು,” ಎಂದನು. ಆಗ ಇಸ್ರಾಯೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ,” ಎಂದನು.


ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.


ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು; ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ಅವರು ನನ್ನ ಉನ್ನತವಾದ ದುರ್ಗವೂ, ನನ್ನ ಆಶ್ರಯವೂ, ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವರೂ ಅವರೇ ಆಗಿದ್ದಾರೆ.


ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.


ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.


ನನ್ನ ದೇವರೇ, ನನ್ನನ್ನು ಕಾಪಾಡು, ಏಕೆಂದರೆ ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.


ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು