Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:14 - ಕನ್ನಡ ಸಮಕಾಲಿಕ ಅನುವಾದ

14 ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಪೊರಾ ಸ್ವಾಭಾವಿಕ್ ಮಾನ್ಸಾ ಹೊವ್ನ್ ಹಾತ್, ಅನಿ ಜೆಜುನ್ಬಿ ಮಾನ್ಸಾಚ್ಯಾ ವರ್ತಿ ಪದ್ವಿ ಚಾಲುತಲ್ಯಾ ಗಿರ್‍ಯಾಕ್ ಅಪ್ನಾಚ್ಯಾ ಮರ್‍ನಾಚ್ಯಾ ವೈನಾ ಹಾರ್ವುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:14
32 ತಿಳಿವುಗಳ ಹೋಲಿಕೆ  

ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ಆದ್ದರಿಂದ ಯೇಸು ತಾವೇ ಶೋಧನೆಗೊಳಗಾಗಿ ಬಾಧೆಯನ್ನು ಅನುಭವಿಸಿರುವುದರಿಂದ, ಶೋಧನೆಗೆ ಒಳಗಾಗುವವರಿಗೆ ಸಹಾಯ ಮಾಡುವುದಕ್ಕೆ ಶಕ್ತರಾಗಿದ್ದಾರೆ.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಆದ್ದರಿಂದ ಕ್ರಿಸ್ತ ಯೇಸು ಭೂಲೋಕದೊಳಗೆ ಬಂದಾಗ, “ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿ ಕೊಟ್ಟಿರುವೆ;


ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ.


ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು