Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:1 - ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾಸಾಟ್ನಿ ಭಕ್ತಿನ್ ಚಲ್ತಲ್ಯಾ ಭಾವಾನು, ಅನಿ ಭೆನಿಯಾನು ದೆವಾಚ್ಯಾ ಬಲ್ವನಿತ್ ಭಾಗಿದಾರ್ ಹೊಲ್ಲ್ಯಾನು, ಅಮ್ಕಾ ಗಾವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಮಾನುನ್ ಘೆಟಲ್ಲ್ಯಾ ಅಮ್ಚ್ಯಾ ಶ್ರೆಸ್ಟ್ ಯಾಜಕ್ ಹೊವ್ನ್ ಅಸಲ್ಲ್ಯಾ ಜೆಜು ಕ್ರಿಸ್ತಾಕ್ಡೆ ಧ್ಯಾನ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:1
63 ತಿಳಿವುಗಳ ಹೋಲಿಕೆ  

ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವುದರಿಂದ


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,


ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.


ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.


“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”


ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.


ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು.


ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.


ಈ ಪತ್ರವನ್ನು ಸಹೋದರ ಸಹೋದರಿಯರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತ ಯೇಸುವಿನ ಹೆಸರಿನಲ್ಲಿ ಆಜ್ಞಾಪಿಸುತ್ತೇನೆ.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.


ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.


ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಅವರು ಅದನ್ನು ಮಾಡಲು ಇಷ್ಟಪಟ್ಟದ್ದಲ್ಲದೆ, ಅದು ಕರ್ತವ್ಯವೂ ಆಗಿದೆ. ಹೌದು, ಯೆಹೂದ್ಯರಲ್ಲದವರು ಯೆಹೂದ್ಯರ ಆತ್ಮಿಕ ಆಶೀರ್ವಾದಗಳಲ್ಲಿ ಪಾಲುಗೊಂಡಿರುವುದಾದರೆ ತಮ್ಮ ಲೌಕಿಕ ವಿಷಯಗಳಲ್ಲಿ ಅವರೊಂದಿಗೆ ಹಂಚಿಕೊಳ್ಳುವುದು ಅವರ ಕರ್ತವ್ಯವಾಗಿದೆ.


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ಆಮೇಲೆ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು,” ಎಂದರು.


“ಈಗ ಚೆನ್ನಾಗಿ ಯೋಚಿಸಿಕೊಳ್ಳಿರಿ. ಯೆಹೋವ ದೇವರ ಆಲಯ ನಿವೇಶನದಲ್ಲಿ, ಕಲ್ಲಿನ ಮೇಲೆ ಕಲ್ಲು ಇಡುವ, ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.


ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು.


“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.


ಆಗ ಯೆಹೋವ ದೇವರ ಹಸ್ತವು ಇದನ್ನು ಮಾಡಿದೆ ಎಂದೂ, ಇಸ್ರಾಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ಕಂಡು ತಿಳಿದು, ಮನಸ್ಸಿಗೆ ಗ್ರಹಿಸಿಕೊಳ್ಳುವರು.


ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಪತಿಯರಿಗೆ ಅಧೀನರಾಗಿದ್ದರು.


ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ರೊಟ್ಟಿ ಒಂದೇ, ಆದ್ದರಿಂದ ನಾವು ಅನೇಕರಿದ್ದರೂ, ಒಂದೇ ದೇಹವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.


ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ಏಕೆಂದರೆ ಮೋಶೆಯ ನಿಯಮವು ಬಲಹೀನರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಿಸುತ್ತದೆ. ಆದರೆ ಮೋಶೆಯ ನಿಯಮದ ತರುವಾಯ ದೇವರ ಆಣೆಯೊಡನೆ ಬಂದ ವಾಕ್ಯವು ನಿತ್ಯವಾಗಿ ಪರಿಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಆದ್ದರಿಂದ ಪ್ರಿಯರೇ, ಯೇಸುವಿನ ರಕ್ತದಿಂದ ಅವರ ದೇಹವೆಂಬ ಪರದೆಯ ಮೂಲಕ ನಮಗೆ ತೆರೆಯಲಾದ


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು