Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:12 - ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಮನುನ್ ಮಾಜ್ಯಾ ಭಾವಾನು ಅನಿ ಭೆನಿಯಾನು ಹುರ್ಶಾಕಿತ್ ರ್‍ಹಾವಾ, ಝಿತ್ತ್ಯಾ ದೆವಾಕ್ನಾ ಧುರ್ ನ್ಹೆತಲೊ ಖೊಟೊ ಅನಿ ವಿಶ್ವಾಸಾನ್ ನಸಲ್ಲೊ ಮನ್ ತುಮ್ಚ್ಯಾ ಕೊನಾಚ್ಯಾ ಭುತ್ತುರ್ ರಾತಲೊ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:12
37 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ”


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.


ಆದ್ದರಿಂದ ನಾನು ಆ ಸಂತತಿಯವರ ಮೇಲೆ ಕೋಪಿಸಿಕೊಂಡು, ‘ಅವರು ಯಾವಾಗಲೂ ತಮ್ಮ ಹೃದಯದಲ್ಲಿ ತಪ್ಪಿಹೋಗುತ್ತಾರೆ, ಅವರು ನನ್ನ ಮಾರ್ಗಗಳನ್ನು ತಿಳಿದುಕೊಳ್ಳಲಿಲ್ಲ.’


ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. ಏಕೆಂದರೆ ಆ ಕಾಲವು ಬರುವುದು ಯಾವಾಗ ಎಂದು ನಿಮಗೆ ತಿಳಿಯದು.


ಆಗ ಯೇಸು ಉತ್ತರವಾಗಿ ಅವರಿಗೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.


ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.


“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.


ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು! ಸರ್ವಶಕ್ತ ನಮಗೇನು ಮಾಡಲು ಸಾಧ್ಯ?’ ಎಂದು ಹೇಳಿಕೊಳ್ಳುತ್ತಿದ್ದರು.


ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.


ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.


ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.


ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.


ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು