Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:13 - ಕನ್ನಡ ಸಮಕಾಲಿಕ ಅನುವಾದ

13 ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹೆಚ್ಯಾ ಬದ್ಲಾಕ್, ಪವಿತ್ರ್ ಪುಸ್ತಕ್ ಪರ್‍ಕಾರ್ ಆಜ್ ಮನ್ತಲೊ ದಿಸ್ ತುಮ್ಕಾ ರ್‍ಹಾಯ್ ಪತರ್ ಕನ್ನಾಬಿ ಎಕಾಮೆಕಾಕ್ನಿ ಉಮ್ಮೆದ್ ದಿವಾ. ಅಶೆ ಪಾಪಾಂಚ್ಯಾ ಪಾಸ್ಯಾತ್ ಪಡುನ್ ಅಪ್ನಾಚೊ ಮನ್ ತೆನಿ ನಿಶ್ಟುರ್ ಕರುನ್ ಘೆವ್‍ನಾಸಿ ಸಾರ್ಕೆ ತುಮಿ ರಾಕ್ತ್ಯಾಶಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:13
13 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.


ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು