Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:14 - ಕನ್ನಡ ಸಮಕಾಲಿಕ ಅನುವಾದ

14 ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶ್ಯಾಕ್ ಮಟ್ಲ್ಯಾರ್, ಅದ್ದಿ ಅಮ್ಕಾ ಗಾವಲ್ಲೆ ವಿಶ್ವಾಸಿಪಾನ್ ಅಮಿ ಸರ್ತ್ಯಾ ಎಳಾರ್ ಪತರ್ ಸಂಬಾಳುನ್ ಘೆವ್ನ್ ಜಾತಾಂವ್ ಮನ್ತಲ್ಯಾ ಗೊಸ್ಟಿ ವೈನಾ ಅಮಿ ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ವಾಟೊ ಘೆತಲೆ ಹೊಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:14
17 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.


ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.


ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.


ಒಂದು ಸಾರಿ ಬೆಳಕನ್ನು ಪಡೆದು, ಪರಲೋಕದ ವರವನ್ನು ರುಚಿ ನೋಡಿ, ಪವಿತ್ರಾತ್ಮ ದೇವರ ಪಾಲನ್ನು ಹೊಂದಿ,


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


ರೊಟ್ಟಿ ಒಂದೇ, ಆದ್ದರಿಂದ ನಾವು ಅನೇಕರಿದ್ದರೂ, ಒಂದೇ ದೇಹವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.


ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


“ಕೆಟ್ಟ ಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಒಳ್ಳೆಯ ದೇಶವನ್ನು ನೋಡುವುದಿಲ್ಲ.


ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.


ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು