Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:2 - ಕನ್ನಡ ಸಮಕಾಲಿಕ ಅನುವಾದ

2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸು ತಮ್ಮನ್ನು ನೇಮಿಸಿದವರಿಗೆ ನಂಬಿಗಸ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸುವೂ ತನ್ನನ್ನು ನೇವಿುಸಿದಾತನಿಗೆ ನಂಬಿಗಸ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮೊಯ್ಜೆ ದೆವಾಚ್ಯಾ ಘರಾನ್ಯಾಕ್ ಕನ್ನಾಬಿ ವಿಶ್ವಾಸಾನ್ ರ್‍ಹಾಲೊ. ತಸೊಚ್ ತೊಬಿ ಅಪ್ನಾಕ್ ನೆಮುನ್ ಕಾಡಲ್ಲ್ಯಾ ದೆವಾ ವರ್ತಿ ವಿಶ್ವಾಸಾನ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:2
14 ತಿಳಿವುಗಳ ಹೋಲಿಕೆ  

ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ನೀವೂ ಸಹ ಆತ್ಮನ ಮೂಲಕ ಕ್ರಿಸ್ತನಲ್ಲಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ನಿರ್ಮಿತರಾಗುತ್ತಿದ್ದೀರಿ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಮಾಡಬೇಕೆಂದು ನೀವು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಮಿಯ ಮೇಲೆ ನಾನು ನಿಮ್ಮನ್ನು ಮಹಿಮೆಪಡಿಸಿದ್ದೇನೆ.


ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.


ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ಆಗ ಸಮುಯೇಲನು ಜನರಿಗೆ, “ಮೋಶೆಯನ್ನೂ, ಆರೋನನನ್ನೂ ಮುಂದಕ್ಕೆ ತಂದವರೂ, ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರೇ ಇದಕ್ಕೆ ಸಾಕ್ಷಿ.


ಮೋಶೆಯು ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು