Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:6 - ಕನ್ನಡ ಸಮಕಾಲಿಕ ಅನುವಾದ

6 ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಕ್ರಿಸ್ತ್ ಲೆಕಾಚ್ಯಾ ಸಾರ್ಕೊ ದೆವಾಚ್ಯಾ ಘರ್ಚೊ ವಿಶ್ವಾಸಾಚೊ ಅದಿಕಾರಿ ಅನಿ ಅಮ್ಕಾ ಗೌರವ್ ಹಾನ್ತಲೊ ವಿಶ್ವಾಸ್ ಅನಿ ಬರೊಸೊ ಅಮಿ ಘಟ್ ಸಂಬಾಳುನ್ ಘೆವ್ನ್ ರಾಲಾಂವ್ ತರ್ ಅಮಿಚ್ ತೆಚೆ ಘರ್ ಹೊತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:6
46 ತಿಳಿವುಗಳ ಹೋಲಿಕೆ  

ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ.


ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.


ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.


ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲವೆಂಬುದೇ.


“ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.


ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.


ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.


ಆದ್ದರಿಂದ ಪ್ರಿಯರೇ, ಯೇಸುವಿನ ರಕ್ತದಿಂದ ಅವರ ದೇಹವೆಂಬ ಪರದೆಯ ಮೂಲಕ ನಮಗೆ ತೆರೆಯಲಾದ


ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವುದರಿಂದ


ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು.


ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು