Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:2 - ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯಾ ಅದ್ಲ್ಯಾ ಲೊಕಾನಿ ಆಯ್ಕಲ್ಲಿ ತಿಚ್ ಬರಿ ಖಬರ್ ಅಮಿಬಿ ಆಯಿಕ್ಲಾವ್, ಖರೆ ತ್ಯಾ ಲೊಕಾನಿ ಆಯ್ಕಲ್ಲಿ ತಿ ಗೊಸ್ಟ್ ವೈನಾ ತೆಂಚ್ಯಾಕ್ನಾ ಕಾಯ್ಬಿ ಫಾಯ್ದೊ ಯೆವ್ಕ್ ನಾ. ಕಶ್ಯಾಕ್ ತೆ ಆಯ್ಕಲ್ಲ್ಯಾನಿ ವಿಶ್ವಾಸಾನ್ ತ್ಯಾ ಗೊಸ್ಟಿಯಾ ಅಪ್ನಾಚ್ಯಾ ಭುತ್ತುರ್ ಜಿರ್‍ವುನ್ ಘೆವ್ಕ್ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:2
20 ತಿಳಿವುಗಳ ಹೋಲಿಕೆ  

ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು.


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಆದ್ದರಿಂದ ಯಾರಿಗೆ ಮೊದಲು ಸುವಾರ್ತೆಯು ಸಾರಲಾಯಿತೋ ಅವರು ಅವಿಧೇಯತೆಯ ನಿಮಿತ್ತ ಆ ವಿಶ್ರಾಂತಿಯಲ್ಲಿ ಸೇರದೆಹೋದರು. ಆದರೂ ಕೆಲವರು ಆ ವಿಶ್ರಾಂತಿಯಲ್ಲಿ ಪ್ರವೇಶಿಸುವ ಅವಕಾಶ ಇನ್ನೂ ಇರುವುದರಿಂದ ಅವರು ಸೇರುವರು.


ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ನಾನು ಮುಂಚೆ ನಿಮಗೆ ಸುವಾರ್ತೆ ಸಾರಿದ್ದು, ನನ್ನ ಶರೀರದ ಬಲಹೀನತೆಯಿಂದ ಎಂದು ನೀವು ಬಲ್ಲಿರಿ.


ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”


ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಲಿಲ್ಲ.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ?


ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು