ಇಬ್ರಿಯರಿಗೆ 4:6 - ಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ಯಾರಿಗೆ ಮೊದಲು ಸುವಾರ್ತೆಯು ಸಾರಲಾಯಿತೋ ಅವರು ಅವಿಧೇಯತೆಯ ನಿಮಿತ್ತ ಆ ವಿಶ್ರಾಂತಿಯಲ್ಲಿ ಸೇರದೆಹೋದರು. ಆದರೂ ಕೆಲವರು ಆ ವಿಶ್ರಾಂತಿಯಲ್ಲಿ ಪ್ರವೇಶಿಸುವ ಅವಕಾಶ ಇನ್ನೂ ಇರುವುದರಿಂದ ಅವರು ಸೇರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರಲಾಗಿ ಆ ವಿಶ್ರಾಂತಿಯಲ್ಲಿ ಕೆಲವರು ಸೇರಬೇಕೆಂಬುವ ಮಾತು ಇನ್ನೂ ಇರುವದರಿಂದಲೂ ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದದ್ದರಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುತ್ತಾರೆಂಬುದು ಇನ್ನೂ ಖಚಿತವಾಗಿದೆ. ಆದರೆ ರಕ್ಷಣಾಮಾರ್ಗವನ್ನು ಮೊದಲು ಕೇಳಿದ ಜನರು ಪ್ರವೇಶಿಸಲಿಲ್ಲ. ಅವರು ವಿಧೇಯರಾಗದೆ ಇದ್ದುದರಿಂದ ಅವರು ಸೇರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಸೆ ಹೊಲ್ಯಾರ್ ಕೊನ್ ತರ್‍ಬಿ ಹ್ಯಾ ಆರಾಮಾತ್ ಜಾವ್ನ್ ಪಾವುಕ್‍ಪಾಜೆ ದೆವಾಚಿ ಬರಿ ಖಬರ್ ಅದ್ದಿ ಆಯ್ಕಲ್ಲ್ಯಾನಿ, ವಿಶ್ವಾಸ್ ಕರುನಸಲ್ಲ್ಯಾಸಾಟಿ ಆರಾಮಾತ್ ಭುತ್ತುರ್ ಗುಸುಕ್ ತೆಂಚ್ಯಾನ್ ಹೊವ್ಕ್ ನಾ . ಅಧ್ಯಾಯವನ್ನು ನೋಡಿ |