ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.
ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.
ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.
ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.
ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.