Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:9 - ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದದರಿಂದ ದೇವರ ಜನರು ಅನುಭವಿಸುವದಕ್ಕಿರುವ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹೆಚ್ಯಾ ವೈನಾ ಸಬ್ಬಾತಾಚೊ ಆರಾಮ್ ದೆವಾಚ್ಯಾ ಲೊಕಾಕ್ನಿ ಅನಿಬಿ ತಯಾರ್ ಕರುನ್ ಥವಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:9
17 ತಿಳಿವುಗಳ ಹೋಲಿಕೆ  

ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.


‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ಮೋಶೆ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟ ಅನುಭವಿಸುವುದನ್ನೇ ಆರಿಸಿಕೊಂಡನು.


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ!’ ಎಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು!”


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬರೂ ತಮ್ಮ ಮರಣದ ಹಾಸಿಗೆಗಳಲ್ಲಿ ವಿಶ್ರಮಿಸಿಕೊಳ್ಳುತ್ತಾರೆ.


ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ.


ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು