ಇಬ್ರಿಯರಿಗೆ 5:1 - ಕನ್ನಡ ಸಮಕಾಲಿಕ ಅನುವಾದ1 ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪ್ರತಿಯೊಬ್ಬ ಮಹಾಯಾಜಕನು ಮನುಷ್ಯರೊಳಗಿಂದ ಆರಿಸಲ್ಪಟ್ಟವನಾಗಿದ್ದು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ಜರಗಿಸುವದಕ್ಕಾಗಿ ನೇವಿುಸಲ್ಪಡುತ್ತಾನಲ್ಲಾ. ಅವನು ಅವರಿಗೋಸ್ಕರ ಕಾಣಿಕೆಗಳನ್ನೂ ಪಾಪನಿವಾರಣಕ್ಕಾಗಿ ಯಜ್ಞಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹರ್ ಎಕ್ಲ್ಯಾ ಶ್ರೆಸ್ಟ್ ಯಾಜಕಾಕ್ ಮಾನ್ಸಾಂಚ್ಯಾ ಮದ್ನಾ ಯೆಚುನ್ ಕಾಡ್ತ್ಯಾತ್, ಅನಿ ಮಾನ್ಸಾಂಚ್ಯಾ ತರ್ಪೆನ್ ದೆವಾಚ್ಯಾ ಇದ್ರಾಕ್ ಸೆವಾ ಕರುಕ್, ಪಾಪಾಂಚ್ಯಾ ಸಾಟ್ನಿ ದೆನ್ಗಿಯಾ ಅನಿ ಬಲಿಯಾ ಭೆಟ್ಟುಕ್ ಮನುನ್ ನೆಮ್ತಾತ್. ಅಧ್ಯಾಯವನ್ನು ನೋಡಿ |