Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:2 - ಕನ್ನಡ ಸಮಕಾಲಿಕ ಅನುವಾದ

2 ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸ್ನಾನ, ಹಸ್ತಾರ್ಪಣಗಳ ವಿಷಯವಾದ ಉಪದೇಶ, ಸತ್ತವರಿಗೆ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಉಂಟೆಂಬದು ಇವುಗಳನ್ನು ಪದೇಪದೇ ಅಸ್ತಿವಾರವಾಗಿ ಹಾಕದೆ ಕ್ರಿಸ್ತನ ವಿಷಯವಾದ ಪ್ರಥಮ ಬೋಧನೆಯನ್ನು ಕುರಿತು ಇನ್ನೂ ಮಾತಾಡದೆ ಪೂರ್ಣವಾದ ತಿಳುವಳಿಕೆಗೆ ಸಾಗುತ್ತಾ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯಾ ವೆಳಾರ್ ಬಾಲ್ತಿಮಾಚ್ಯಾ ವಿಶಯಾತ್, ಹಾತ್ ಥವ್ತಲ್ಯಾ ವಿಶಯಾತ್, ಅನಿ ಮರಲ್ಲೊ ಅನಿಪರ್‍ತುನ್ ಝಿತ್ತೊ ಹೊತಲೆ, ಕನ್ನಾಬಿ ಚುಕಿನಸಲ್ಲಿ ಝಡ್ತಿ ಹ್ಯಾ ಶಿಕಾಪಾಚ್ಯಾ ವಿಶಯಾತ್ನಿ, ಪರ್ತುನ್ ಪಾಯ್ ಘಾಲುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:2
57 ತಿಳಿವುಗಳ ಹೋಲಿಕೆ  

ಇವರನ್ನು ಅಪೊಸ್ತಲರ ಮುಂದೆ ತಂದು ನಿಲ್ಲಿಸಿದರು. ಅವರು ಪ್ರಾರ್ಥನೆಮಾಡಿ ಅವರ ಮೇಲೆ ತಮ್ಮ ಹಸ್ತಗಳನ್ನಿಟ್ಟು ನೇಮಿಸಿದರು.


ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.


ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು.


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.


“ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?” ಎಂದು ಹೇಳಿದನು.


ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು,


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಅವರು ಪುನರುತ್ಥಾನವು ಆಗಲೇ ಆಗಿ ಹೋಯಿತೆಂದು ಹೇಳುತ್ತಾ ಸತ್ಯದ ಗುರಿಯನ್ನು ತಪ್ಪಿದವರಾಗಿ ಕೆಲವರ ವಿಶ್ವಾಸವನ್ನು ಕೆಡಿಸಿಬಿಡುವವರಾಗಿದ್ದಾರೆ.


ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.


ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಅವರೆಲ್ಲರೂ ಮೋಶೆಯಲ್ಲಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಸ್ನಾನವನ್ನು ಹೊಂದಿದರು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ?


‘ಇಂದು ನಾನು ನಿಮ್ಮ ಮುಂದೆ ನ್ಯಾಯವಿಚಾರಣೆಗೆ ನಿಂತಿರುವುದು ಸತ್ತವರ ಪುನರುತ್ಥಾನಕ್ಕೆ ಸಂಬಂಧಿಸಿದ್ದು,’ ಎಂದು ಅವರ ಮಧ್ಯದಲ್ಲಿ ನಿಂತು ಕೂಗಿದ್ದನ್ನು ಬಿಟ್ಟರೆ ಬೇರೆ ಏನನ್ನೂ ಇವರು ಹೇಳಲಾರರು,” ಎಂದನು.


ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.


ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು.


ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು.


ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”


ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!


ಆದರೆ ಊಟಕ್ಕೆ ಮೊದಲು ಯೇಸು ಕೈತೊಳೆಯದೆ ಇರುವುದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.


ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.


ನೀವು ದೇವರ ಆಜ್ಞೆಯನ್ನು ತೊರೆದು, ಮನುಷ್ಯರ ಸಂಪ್ರದಾಯಗಳನ್ನು ಹಿಡಿದುಕೊಂಡಿದ್ದೀರಿ,” ಎಂದರು.


ಪೇಟೆಗೆ ಹೋಗಿ ಬಂದರೆ ಅವರು ಸ್ನಾನ ಮಾಡದೆ ಊಟಮಾಡುತ್ತಿರಲಿಲ್ಲ. ಮಾತ್ರವಲ್ಲದೆ ಲೋಟ, ಚೆಂಬು ಮತ್ತು ತಪ್ಪಲೆಗಳನ್ನು ಬೆಳಗಿ ತೊಳೆಯುವುದು ಮುಂತಾದ ಅನೇಕ ಶುದ್ಧಾಚಾರಗಳನ್ನು ಅವರು ಪಾಲಿಸುತ್ತಿದ್ದರು.


ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.


ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು