ಇಬ್ರಿಯರಿಗೆ 6:8 - ಕನ್ನಡ ಸಮಕಾಲಿಕ ಅನುವಾದ8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತಿಚ್ ಜಿಮಿನ್ ಭಾತಾಚ್ಯಾ ಬದ್ಲಾಕ್ ಅನಿ ನಕ್ಕೊ ಹೊಲ್ಲಿ ಝಾಡಾ ಚಿಗ್ರುಕ್ ಅವ್ಕಾಸ್ ದಿಲ್ಯಾರ್ ತೆಕಾ ದೆವ್ ಶರಾಪ್ ದಿತಾ, ಅನಿ ಕಾಟ್ಯಾಂಚ್ಯಾ ಝಾಡಾಕ್ನಿ ಆಗಿತ್ ಘಾಲುನ್ ಹೊತಾ. ಅಧ್ಯಾಯವನ್ನು ನೋಡಿ |
ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.