Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:10 - ಕನ್ನಡ ಸಮಕಾಲಿಕ ಅನುವಾದ

10 ಹೇಗೆಂದರೆ, ಮೆಲ್ಕಿಜೆದೇಕನು ಅಬ್ರಹಾಮನನ್ನು ಸಂಧಿಸಿದಾಗ, ಲೇವಿಯು ತನ್ನ ಪಿತೃ ಆದ ಅಬ್ರಹಾಮನ ದೇಹದಲ್ಲಿ ಇದ್ದನು ಎಂದು ಪರಿಗಣಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೇಗೆಂದರೆ, ಮೆಲ್ಕಿಸದೇಕನು ಅಬ್ರಹಾಮನನ್ನು ಎದುರುಗೊಂಡಾಗ, ಲೇವಿಯು ಇನ್ನೂ ಹುಟ್ಟಿರಲಿಲ್ಲವಾದರೂ ತತ್ವಶಃ ಆತನು ತನ್ನ ಪೂರ್ವಜ ಅಬ್ರಹಾಮನ ಉದರದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೇಗಂದರೆ ಮೆಲ್ಕಿಜೆದೇಕನು ಲೇವಿಯ ಮೂಲಪುರುಷನನ್ನು ಎದುರುಗೊಂಡಾಗ ಲೇವಿಯು ತತ್ವರೂಪವಾಗಿ ಇವನೊಳಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಲೇವಿಯು ಇನ್ನೂ ಹುಟ್ಟಿರಲಿಲ್ಲ. ಆದರೆ ಮೆಲ್ಕಿಜೆದೇಕನು ಅಬ್ರಹಾಮನನ್ನು ಎದುರುಗೊಂಡಾಗ, ಲೇವಿಯು ತನ್ನ ಪೂರ್ವಿಕನಾದ ಅಬ್ರಹಾಮನ ದೇಹದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮೆಲ್ಕಿಜೆದೆಕ್ ಅಬ್ರಾಹಾಮಾಕ್ ಭೆಟಲ್ಲ್ಯಾ ತನ್ನಾ ಲೆವಿ ಅಜುನ್ ಉಪ್ಜುನಸಲ್ಲೊ, ಖರೆ ಅಪ್ಲೊ ಬಾಬಾ ಅಬ್ರಾಹಾಮಾಚ್ಯಾ ಆಂಗಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:10
7 ತಿಳಿವುಗಳ ಹೋಲಿಕೆ  

ನಿಜವಾಗಿಯೂ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಮೋಶೆಯ ನಿಯಮದಲ್ಲಿ ಅಪ್ಪಣೆಯಿದೆ.


ಯಾಕೋಬನ ಪುತ್ರರ ಹೆಂಡತಿಯರಲ್ಲದೆ, ಯಾಕೋಬನ ಸಂಗಡ ಈಜಿಪ್ಟಿಗೆ ಹೋದವರು ಒಟ್ಟು ಅರವತ್ತಾರು ಮಂದಿ.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.


ಇದು ಮಾತ್ರವಲ್ಲದೆ ದಶಮಭಾಗಗಳನ್ನು ತೆಗೆದುಕೊಳ್ಳುವ ಲೇವಿಯೂ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತು.


ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು