Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:20 - ಕನ್ನಡ ಸಮಕಾಲಿಕ ಅನುವಾದ

20 ಇದಂತೂ ಆಣೆಯಿಲ್ಲದೆ ಆಗಿರುವಂಥದ್ದಲ್ಲ! ಲೇವಿಯರು ಆಣೆಯಿಲ್ಲದೆಯೇ ಯಾಜಕರಾದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದು ಪ್ರತಿಜ್ಞೆ ರಹಿತವಾದ್ದದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ, ಲೇವಿಯರು ಯಾಜಕರಾದಾಗ, ದೇವರು ಯಾವ ಶಪಥವನ್ನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20-21 ಇದಲ್ಲದೆ ಲೇವಿಯರು ಆಣೆಯಿಲ್ಲದೆ ಯಾಜಕರಾದರು; ಆತನಾದರೋ ಆಣೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ದೇವರು ಆತನಿಗೆ - ನೀನು ಸದಾಕಾಲವೂ ಯಾಜಕನಾಗಿದ್ದೀ ಎಂದು ಕರ್ತನೆಂಬ ನಾನು ಆಣೆಯಿಟ್ಟು ನುಡಿದೆನು; ಪಶ್ಚಾತ್ತಾಪಪಡುವದಿಲ್ಲ ಎಂಬದಾಗಿ ಹೇಳಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ಯೇಸುವನ್ನು ಪ್ರಧಾನಯಾಜಕನನ್ನಾಗಿ ಮಾಡಿದಾಗ, ಒಂದು ವಾಗ್ದಾನವನ್ನೂ ಮಾಡಿದನು. ಆದರೆ ಬೇರೆಯವರು ಯಾಜಕರಾದಾಗ ಆತನು ವಾಗ್ದಾನ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ದೆವಾನ್ ದುಸ್ರ್ಯಾ ಲೊಕಾಕ್ನಿ ಯಾಜಕ್ ಮನುನ್ ಎಚುನ್ ಕಾಡಲ್ಲ್ಯಾ ತನ್ನಾ ಗೊಸ್ಟ್ ದಿವ್ಕ್ ನಸಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:20
5 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.


“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.


ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.


ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು